ಎಫ್‌ಬಿಕೆ ಕೂಟದಿಂದ ಹಿಂದೆ ಸರಿದ ನೀರಜ್ ನವದೆಹಲಿ: ಭಾರತದ ಜಾವೆಲಿನ್ ಥ್ರೊ ಸ್ಪರ್ಧಿ ನೀರಜ್‌ ಚೋಪ್ರಾ ಅವರು ಮುಂದಿನ ತಿಂಗಳು ನೆದರ್ಲೆಂಡ್ಸ್‌ನಲ್ಲಿ ನಡೆಯಲಿರುವ ಎಫ್‌ಬಿಕೆ ಅಥ್ಲೆಟಿಕ್‌ ಕೂಟದಿಂದ ಹಿಂದೆ ಸರಿದಿದ್ದಾರೆ. ‘ಇತ್ತೀಚೆಗೆ ತರಬೇತಿ ನಡೆಸುತ್ತಿದ್ದಾಗ ಸ್ನಾಯು ಸೆಳೆತಕ್ಕೆ ಒಳಗಾಗಿದ್ದೆ. ನೋವು ಉಲ್ಬಣಿಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೂಟದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್ಸ್‌ನ ಕಾಂಟಿನೆಂಟಲ್ ಗೋಲ್ಡ್‌ ಲೆವೆಲ್‌ ಕೂಟ ಎನಿಸಿರುವ ಎಫ್‌ಬಿಕೆ ಕೂಟವು ಜೂನ್‌ 4 ರಂದು ನಡೆಯಲಿದೆ. 25 ವರ್ಷದ ನೀರಜ್‌ ಅವರು ಈಚೆಗೆ ಜಾವೆಲಿನ್‌ ಥ್ರೊ ಸ್ಪರ್ಧಿಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.