ರಾಷ್ಟ್ರೀಯ ತ್ರೋಬಾಲ್ ಶಿಬಿರ ಆರಂಭ ಪುತ್ತೂರು: ತಾಲ್ಲೂಕಿನ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಥ್ರೋಬಾಲ್ ಶಿಬಿರ ಗುರುವಾರ ಆರಂಭಗೊಂಡಿತು. ಪಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಪಿ. ನಾರಾಯಣ ಭಟ್ ಉದ್ಘಾಟಿಸಿದರು. ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ವೇಣುಗೋಪಾಲ್ ಪಿ ಅವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯಶ್ ರೈ ಮುಖ್ಯ ಅತಿಥಿಯಾಗಿದ್ದರು. ಪುತ್ತೂರು ಜನ್ಮ ಫೌಂಡೇಶನ್ ಅಧ್ಯಕ್ಷ ಹರ್ಷ ಕುಮಾರ್ ರೈ ಮಾಡಾವು ಮಾತನಾಡಿದರು. ಕೆದಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತನ್ ರೈ ಕುಂಬ್ರ, ನಿವೃತ್ತ ಮುಖ್ಯ ಶಿಕ್ಷಕ ವೈ.ಕೃಷ್ಣ ನಾಯ್ಕ್, ಪ್ರಗತಿಪರ ಕೃಷಿಕ ಹರೀಶ್ ರೈ ದೇರ್ಲ, ಅರಿಯಡ್ಕ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಲೋಕೇಶ್ ಅಮೈ, ಕೆಯ್ಯೂರು ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಬಾಬು ಇದ್ದರು. ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಾಜಗೋಪಾಲ್ ಸ್ವಾಗತಿಸಿದರು. ಪ್ರತಿಭಾ ಪ್ರೌಢ ಶಾಲೆಯ ಶಿಕ್ಷಕ ವಿಶ್ವನಾಥ ಬೊಳ್ಳಾಡಿ ನಿರೂಪಿಸಿದರು. ಪುತ್ತೂರು ತಾಲೂಕಿನಲ್ಲಿ ಮೊದಲ ಬಾರಿ ರಾಷ್ಟ್ರೀಯ ಥ್ರೋಬಾಲ್ ಶಿಬಿರ ನಡೆಯುತ್ತಿದೆ. ಭಾರತ ತ್ರೋಬಾಲ್ ತಂಡದ ಸದಸ್ಯೆ ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ವಿಜೇತ್ ಮಾರ್ಗದರ್ಶನ ನೀಡುತ್ತಿದ್ದು ಪಟ್ಟೆ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಂ.ಮೋನಪ್ಪ ನೇತೃತ್ವ ವಹಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.