ಪ್ಯಾರಾ ಶೂಟಿಂಗ್: ರಾಮಕೃಷ್ಣಗೆ ಚಿನ್ನ ನವದೆಹಲಿ : ಶ್ರೀಹರ್ಷ ದೇವರಡ್ಡಿ ರಾಮಕೃಷ್ಣ ಅವರು ಫ್ರಾ‌ನ್ಸ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್‌ ಪ್ಯಾರಾ ಶೂಟಿಂಗ್‌ನಲ್ಲಿ 10 ಮೀ. ಏರ್‌ ರೈಫಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದರಲ್ಲದೆ, ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದರು. ರಾಮಕೃಷ್ಣ ಅವರು 253.1 ಪಾಯಿಂಟ್ ಕಲೆಹಾಕಿ ಅಗ್ರಸ್ಥಾನ ಗಳಿಸಿದರು. ಭಾರತದ ಅವನಿ ಲೇಖರಾ ಅವರು ಮಹಿಳೆಯರ ಏರ್‌ ರೈಫಲ್‌ ವಿಭಾಗದಲ್ಲಿ ಇದೇ ಸಾಧನೆ ಮಾಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.