ಕುಸ್ತಿ ಪ್ರತಿಭಟನೆ: ರಾಮ್‌ ಲೀಲಾ ಮೈದಾನಕ್ಕೆ ಸ್ಥಳಾಂತರಕ್ಕೆ ಚಿಂತನೆ ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬ್ರಿಜ್‌ಭೂಷಣ್ ಶರಣ್ ಸಿಂಗ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಜಂತರ್‌ ಮಂತರ್‌ನಿಂದ ರಾಮ್‌ ಲೀಲಾ ಮೈದಾನಕ್ಕೆ ಸ್ಥಳಾಂತರಿಸಲು ಕುಸ್ತಿಪಟುಗಳು ಚಿಂತನೆ ನಡೆಸಿದ್ಧಾರೆ. ‘ಪ್ರತಿಭಟನೆಯ ತಾಣವನ್ನು ಬದಲಾಯಿಸುವ ಚಿಂತನೆ ನಡೆಸಿದ್ದೇವೆ. ನಾವು ಪರಸ್ಪರ ಸಮಾಲೋಚನೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವೆವು’ ಎಂದು ಸಾಕ್ಷಿ ಮಲಿಕ್‌ ಮಂಗಳವಾರ ಹೇಳಿದರು. ಬ್ರಿಜ್‌ಭೂಷಣ್‌ ಅವರ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್‌ ಪೂನಿಯಾ ಮತ್ತು ವಿನೇಶಾ ಫೋಗಟ್‌ ನೇತೃತ್ವದಲ್ಲಿ ಕಳೆದ 24 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.