ಡ್ಯಾನಿಶ್‌ ಈಜುಕೂಟ: ನಟ ಮಾಧವನ್ ಪುತ್ರ ವೇದಾಂತ್‌ಗೆ ಚಿನ್ನ, ಬೆಳ್ಳಿ ಡೆನ್ಮಾರ್ಕ್‌ನ ಕೋಪನ್‌ಹೇಗನ್‌ನಲ್ಲಿ ನಡೆದಡ್ಯಾನಿಶ್‌ ಓಪನ್ ಈಜುಕೂಟದಲ್ಲಿ ಖ್ಯಾತ ನಟ ಆರ್‌. ಮಾಧವನ್ ಪುತ್ರ ವೇದಾಂತ್‌ ಚಿನ್ನ, ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. 800 ಮೀಟರ್ಸ್‌ ಹಾಗೂ 1500 ಮೀಟರ್ಸ್ ಫ್ರೀಸ್ಟೈಲ್ ವಿಭಾಗದಲ್ಲಿ ಸ್ಪರ್ಧಿಸಿದ್ದ 16 ವರ್ಷದ ವೇದಾಂತ್‌ ಮಾಧವನ್ ವೈಯಕ್ತಿಕ ಶ್ರೇಷ್ಠ ಸಾಧನೆಯೊಂದಿಗೆ ಚಿನ್ನ ಮತ್ತು ಬೆಳ್ಳಿ ಪದಕ ಜಯಿಸಿದರು. 800 ಮೀಟರ್ಸ್ ಗುರಿಯನ್ನು 8 ನಿಮಿಷ 17.28 ಸೆಕೆಂಡ್‌ಗಳಲ್ಲಿ ತಲುಪಿ ಚಿನ್ನದ ಪದಕ ಮುಡಿಗೇರಿಸಿಕೊಂಡರು. ಹಾಗೇ 1500 ಮೀಟರ್ಸ್ ಗುರಿಯನ್ನು 15 ನಿಮಿಷ 57.86 ಸೆಕೆಂಡುಗಳಲ್ಲಿ ತಲುಪುವ ಮೂಲಕ ಬೆಳ್ಳಿ ಗೆದ್ದರು. 2021ರ ಮಾರ್ಚ್‌ನಲ್ಲಿ ನಡೆದಿದ್ದ ಲಾತ್ವಿಯಾ ಓಪನ್‌ನಲ್ಲಿ ಕಂಚು ಗೆದ್ದಿದ್ದರು. ಅದೇ ವರ್ಷ ನಡೆದ ರಾಷ್ಟ್ರೀಯ ಜೂನಿಯರ್ ಈಜು ಚಾಂಪಿಯನ್‌ಷಿಪ್‌ನಲ್ಲೂ ಏಳು ಪದಕಗಳು ಅವರ ಕೊರಳಿಗೇರಿದ್ದವು. ಓದನ್ನೂ ಓದಿ:ಹುಬ್ಬಳ್ಳಿ ಗಲಭೆ: ಪೊಲೀಸ್‌ ಕಟ್ಟೆಚ್ಚರ- 89 ಮಂದಿ ಬಂಧನ ಮಗನ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ನಟ ಮಾದವನ್ ಸಾಮಾಜಿಕ ಮಾಧ್ಯಮಗಳಲ್ಲಿ ವೇದಾಂತ್ ಫೋಟೊಗಳನ್ನು ಶೇರ್ ಮಾಡಿದ್ದಾರೆ. ಓದನ್ನೂ ಓದಿ:ಹುಬ್ಬಳ್ಳಿ ಗಲಭೆ: ವಾಟ್ಸ್‌ಆ್ಯ‌ಪ್‌ ಸ್ಟೇಟಸ್‌ನಲ್ಲಿ ಏನಿತ್ತು? . (@) ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.