ಪ್ಯಾರಾ ಈಜು: ಪುನೀತ್ ಮಿಂಚು ಬೆಂಗಳೂರು: ಕರ್ನಾಟಕದ ಪುನೀತ್ ನಂದಕುಮಾರ್ ಅವರು ಇತ್ತೀಚೆಗೆ ಸಿಂಗಪುರದಲ್ಲಿ ನಡೆದ ಪ್ಯಾರಾ ವಿಶ್ವ ಈಜು ಸರಣಿಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ನಾಲ್ಕು ವಿಭಾಗಗಳಲ್ಲಿ ಏಷ್ಯನ್‌ ಪ್ಯಾರಾ ಗೇಮ್ಸ್‌ಗೆ ಅಗತ್ಯವಿದ್ದ ಕನಿಷ್ಠ ಅರ್ಹತೆಯನ್ನು ಮೀರಿದ್ದಾರೆ. 100 ಮೀಟರ್ಸ್ ಫ್ರೀಸ್ಟೈಲ್‌ನಲ್ಲಿ 1 ನಿಮಿಷ 12.82 ಸೆಕೆಂಡುಗಳಲ್ಲಿ, 400 ಮೀ. ಫ್ರೀಸ್ಟೈಲ್‌ನಲ್ಲಿ 5 ನಿ. 41.41 ಸೆಕೆಂಡು, 100 ಮೀ. ಬ್ಯಾಕ್‌ಸ್ಟ್ರೋಕ್‌ನಲ್ಲಿ 1 ನಿ.30.37 ಸೆ. ಮತ್ತು 200 ಮೀ. ವೈಯಕ್ತಿಕ ಮೆಡ್ಲೆಯಲ್ಲಿ 3 ನಿ. 8.94 ಸೆಕೆಂಡುಗಳಲ್ಲಿ ಗುರಿ ತಲುಪಿದರು. ಏಷ್ಯನ್ ಪ್ಯಾರಾ ಗೇಮ್ಸ್‌ ಈ ವರ್ಷದ ಅಕ್ಟೋಬರ್‌ನಲ್ಲಿ ನಿಗದಿಯಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.