ಬಾಲ್‌ ಬ್ಯಾಡ್ಮಿಂಟನ್: ಪವಿತ್ರಾ ಆಯ್ಕೆ ಬೆಂಗಳೂರು: ಆನೇಕಲ್‌ನ ಕೆ. ಪವಿತ್ರಾ ಅವರು ರಾಷ್ಟ್ರೀಯ ಜೂನಿಯರ್‌ ಬಾಲ್ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆನೇಕಲ್‌ ಅಕ್ಷರ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪವಿತ್ರಾ, ಇದೇ 24ರಿಂದ 28ರವರೆಗೆ ತಮಿಳುನಾಡಿನ ದಿಂಡಿಗಲ್‌ನಲ್ಲಿ ನಡೆಯಲಿರುವ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯ ತಂಡದ ಪರ ಆಡಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.