ಅಥ್ಲೆಟಿಕ್ಸ್‌: ಪ್ರಿಯಾ ಮೋಹನ್‌ಗೆ ಚಿನ್ನ ಬೆಂಗಳೂರು: ಕರ್ನಾಟಕದ ಪ್ರಿಯಾ ಮೋಹನ್ ಅವರು ಒಡಿಶಾದ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕಳಿಂಗ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಸ್ಟ್ರಿಯಲ್ ಟೆಕ್ನಾಲಜಿ ಸಂಸ್ಥೆಯ ಆವರಣದಲ್ಲಿ ಮಂಗಳವಾರ ನಡೆದ ಚಾಂಪಿಯನ್‌ಷಿಪ್‌ನ 400 ಮೀಟರ್ಸ್‌ ವಿಭಾಗದಲ್ಲಿ ಅವರು 52.58 ಸೆಕೆಂಡುಗಳಲ್ಲಿ ಗುರಿ ತಲುಪಿದರು. ಪ್ರಿಯಾ ಅವರು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಿದ್ದಾರೆ. ಸೋಮವಾರ ಆರಂಭವಾಗಿರುವ ಚಾಂಪಿಯನ್‌ಷಿಪ್‌ ಇದೇ 24ರವರೆಗೆ ನಡೆಯಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.