ಭಾರತ ಒಲಿಂಪಿಕ್ ಸಂಸ್ಥೆ ಸಭೆ ಸ್ಥಳಾಂತರ ನವದೆಹಲಿ: ಇದೇ 19ರಂದು ಗುವಾಹಟಿಯಲ್ಲಿ ಆಯೋಜಿಸಲಾಗಿರುವ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ವಾರ್ಷಿಕ ಸರ್ವಸದಸ್ಯರ ಸಭೆಯನ್ನು ರಾಷ್ಟ್ರ ರಾಜಧಾನಿಗೆ ಸ್ಥಳಾಂತರಿಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಇದರಿಂದಾಗಿ ಸಭೆಯನ್ನು ನಿಗದಿತ ದಿನಾಂಕದಂದು ನವದೆಹಲಿಯ ಐಒಎ ಭವನದಲ್ಲಿ ಆಯೋಜಿಸಲಾಗುತ್ತಿದೆ. ಐಒಎ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ದೂರಿನ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ನ ವಿಶೇಷ ಪೀಠದ ನ್ಯಾಯಮೂರ್ತಿ ಮನಮೋಹನ್ ಮತ್ತು ನಜ್ಮಿ ವಜೀರಿ ಅವರು ಈ ನಿರ್ದೇಶನ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಇದೇ 23ರಂದು ಪೀಠವು ನಡೆಸಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.