ಕ್ರೀಡಾಪಟುಗಳಿಗೆ ನೇರ ನೇಮಕಾತಿ: ಸಚಿವ ಸಂಪುಟ ಸಭೆ ಒಪ್ಪಿಗೆ ಬೆಂಗಳೂರು: ಕ್ರೀಡಾ ಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪದಕ ವಿಜೇತ ಕ್ರೀಡಾಪಟುಗಳು ನಿರ್ದಿಷ್ಟ ಹುದ್ದೆಗೆ ಅಗತ್ಯವಿರುವ ಶಿಕ್ಷಣ ಅರ್ಹತೆಯನ್ನು ಪಡೆದಿರಬೇಕು. ಆದರೆ, ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಉಪವಿಭಾಗಾಧಿಕಾರಿ, ಸಹಾಯಕ ಆಯುಕ್ತರ ಹುದ್ದೆಗಳು ಸೇರಿ 9 ಇಲಾಖೆಗಳಲ್ಲಿ ತಲಾ 5 ರಂತೆ 45 ಗ್ರೂಪ್‌ ಎ ಹುದ್ದೆಗಳು, ತಹಶೀಲ್ದಾರ್‌ ಸೇರಿ 15 ಇಲಾಖೆಗಳಲ್ಲಿ 150 ಗ್ರೂಪ್‌ ಬಿ ವೃಂದದ ಹುದ್ದೆಗಳನ್ನು ಕಾಯ್ದಿರಿಸಲಾಗಿದೆ.ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮಾಡಲಾಗುವುದು ಎಂದು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.