ಕಾಮನ್‌ವೆಲ್ತ್ ಗೇಮ್ಸ್‌ಗೆ ತಜಿಂದರ್ ಇಲ್ಲ ನವದೆಹಲಿ (ಪಿಟಿಐ): ಭಾರತದ ಶಾಟ್‌ಪಟ್ ಅಥ್ಲೀಟ್‌ ತಜಿಂದರ್ ಪಾಲ್ ಸಿಂಗ್ ತೂರ್ ಗಾಯದ ಹಿನ್ನೆಲೆಯಲ್ಲಿ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಣಕ್ಕಿಳಿಯುವುದಿಲ್ಲ. ಸದ್ಯ ತೂರ್, ವಿಶ್ವಚಾಂಪಿಯನ್‌ಷಿಪ್‌ ಸ್ಪರ್ಧೆಗಾಗಿ ಅಮೆರಿಕದ ಯೂಜೀ ನ್‌ನಲ್ಲಿದ್ದಾರೆ. ಅವರಿಗೆ ನಾಲ್ಕು ದಿನಗಳ ಹಿಂದೆ ತೊಡೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಶನಿವಾರ ನಡೆಯಬೇಕಿದ್ದ ಸ್ಪರ್ಧೆಯಲ್ಲಿ ಅವರು ಕಣಕ್ಕಿಳಿಯಲಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.