ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌: ಪ್ರಣಯ್‌ ಶುಭಾರಂಭ ಬರ್ಮಿಂಗ್‌ಹ್ಯಾಂ: ಸೊಗಸಾದ ಆಟವಾಡಿದ ಭಾರತದ ಎಚ್‌.ಎಸ್‌.ಪ್ರಣಯ್‌ ಅವರು ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದರು. ಗುರುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಅವರು 21–19, 22–20 ರಲ್ಲಿ ಚೀನಾ ತೈಪೆಯ ತ್ಸು ವೀ ವಾಂಗ್‌ ವಿರುದ್ಧ ನೇರ ಗೇಮ್‌ಗಳಿಂದ ಗೆದ್ದರು. ವಿಶ್ವ ರ್‍ಯಾಂಕಿಂಗ್‌ನಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಪ್ರಣಯ್‌, 49 ನಿಮಿಷಗಳಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ವಾಂಗ್‌ ವಿರುದ್ಧದ ಗೆಲುವಿನ ದಾಖಲೆಯನ್ನು 5–3ಕ್ಕೆ ಹೆಚ್ಚಿಸಿಕೊಂಡರು. ಭಾರತದ ಆಟಗಾರ ಮುಂದಿನ ಸುತ್ತಿನಲ್ಲಿ ಇಂಡೊನೇಷ್ಯಾದ ಆ್ಯಂಟನಿ ಸಿನಿಸುಕ ಗಿಂಟಿಂಗ್‌ ಅವರ ಸವಾಲು ಎದುರಿಸಲಿದ್ಧಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.