ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಏಕ್ತಾ ಅರ್ಹತೆ ನವದೆಹಲಿ: ಭಾರತದ ಏಕ್ತಾ ಭಯಾನ್ ಅವರು ವಿಶ್ವ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಿದ್ದಾರೆ. ದುಬೈ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾನ್‌ಪ್ರಿಯ ವೀಲ್‌ಚೇರ್‌ ಡಿಸ್ಕಸ್‌ ಥ್ರೊ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದರು. ಕ್ಲಬ್‌ ಥ್ರೊ ಸ್ಪರ್ಧೆಗಳಲ್ಲಿ ಅವರು ತೋರಿದ ಸಾಧನೆಯ ಹಿನ್ನೆಲೆಯಲ್ಲಿ ಅವರಿಗೆ ಪ್ಯಾರಿಸ್‌ನಲ್ಲಿ ಜುಲೈ 8ರಿಂದ 17ರವರೆಗೆ ನಡೆಯಲಿರುವ ವಿಶ್ವ ಚಾಂಪಿಯನ್‌ಷಿಪ್‌ಗೆ ಅರ್ಹತೆ ಲಭಿಸಿದೆ. ದುಬೈ ಗ್ರ್ಯಾನ್‌ಪ್ರಿಯಲ್ಲಿ ಭಾರತ ಒಟ್ಟು ಏಳು ಪದಕಗಳನ್ನು (ಏಳು ಬೆಳ್ಳಿ ಮತ್ತು ಮೂರು ಕಂಚು) ಗೆದ್ದುಕೊಂಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.