ಕಬಡ್ಡಿ ಫೆಡರೇಷನ್: ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಸೂಚನೆ ನವದೆಹಲಿ: ಭಾರತ ಅಮೆಚೂರ್ ಕಬಡ್ಡಿ ಫೆಡರೇಷನ್‌ಗೆ (ಎಕೆಎಫ್‌ಐ) ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ದೆಹಲಿ ಹೈಕೋರ್ಟ್‌ ಫೆಡರೇಷನ್‌ನ ಆಡಳಿತಗಾರರಿಗೆ ಸೂಚಿಸಿದೆ. ಆಡಳಿತ ಮಂಡಳಿಯ ಸದಸ್ಯರ ‘ವಯಸ್ಸು ಮತ್ತು ಅಧಿಕಾರಾವಧಿಯ ನಿರ್ಬಂಧ’ ಸೇರಿದಂತೆ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಚುನಾವಣೆ ಅಧಿಸೂಚನೆ ಹೊರಡಿ ಸಬೇಕು ಎಂದು ನ್ಯಾಯಾಲಯ ಹೇಳಿದೆ. ರಾಷ್ಟ್ರೀಯ ಕ್ರೀಡಾ ಸಂಹಿತೆಯು ಎಕೆಎಫ್‌ಐ ಮಾತ್ರವಲ್ಲದೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅದರ ಎಲ್ಲಾ ಅಂಗಸಂಸ್ಥೆಗಳಿಗೂ ಅನ್ವಯಿಸುತ್ತದೆ ಎಂದು ಕೋರ್ಟ್‌ ಹೇಳಿದೆ. ಚುನಾವಣೆಗಳು ನಡೆಯಬೇಕಾಗಿರುವುದರಿಂದ, ಕ್ರೀಡಾ ಸಂಹಿತೆಯ ಅನುಷ್ಠಾನಕ್ಕೆ ಸಂಬಂಧಿಸಿದ ಐದು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕೋರ್ಟ್ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.