ವಿಶ್ವಕಪ್ ಹಾಕಿ: ನ್ಯೂಜಿಲೆಂಡ್ ಎದುರು ಭಾರತಕ್ಕೆ ಸೋಲು ಭುವನೇಶ್ವರ: ಭಾರತ ತಂಡವು ಪುರುಷರ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಭಾನುವಾರ ಕ್ರಾಸ್‌ಓವರ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಪರಾಭವಗೊಂಡಿತು. ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಸೋಲುವ ಮೂಲಕ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಗಳಿಸುವಲ್ಲಿ ಭಾರತ ವಿಫಲವಾಯಿತು. . 3-3 . ##HWC2023# ../rY4gIPtXwY ಉಭಯ ತಂಡಗಳು ತಲಾ ಮೂರು ಗೋಲು ಗಳಿಸಿ ಸಮಬಲ ಸಾಧಿಸಿದ್ದವು. ಪೆನಾಲ್ಟಿ ಶೂಟೌಟ್‌ನಲ್ಲಿ 4–5 ಗೋಲುಗಳ ಅಂತರದಲ್ಲಿ ಭಾರತ ಪರಾಭವಗೊಂಡಿತು. ಭಾರತ ಕ್ವಾರ್ಟರ್‌ಫೈನಲ್‌ ಪ್ರವೇಶ ಮಾಡುವ ಕನಸು ಭಗ್ನಗೊಂಡಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.