21, 22 ರಂದು ರಾಜ್ಯ ಆರ್ಚರಿ ಚಾಂಪಿಯನ್‌ಷಿಪ್‌ ಬೆಂಗಳೂರು: ಕರ್ನಾಟಕ ಅಮೆಚೂರ್ ಆರ್ಚರಿ ಸಂಸ್ಥೆಯು ಜನವರಿ 21 ಮತ್ತು 22ರಂದು ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಆರ್ಚರಿ ಚಾಂಪಿಯನ್‌ಷಿಪ್‌ಅನ್ನು ಆಯೋಜಿಸಲಿದೆ. 14, 17 ಮತ್ತು 20 ವರ್ಷದೊಳಗಿನವರು, ಸೀನಿಯರ್ ಪುರುಷ ಮತ್ತು ಮಹಿಳೆಯರ ವಿಭಾಗಗಳಲ್ಲಿ ಚಾಂಪಿಯನ್‌ಷಿಪ್ ನಡೆಯಲಿದೆ. ಆಸಕ್ತರು ಇದೇ 18ರೊಳಗೆ ಸಂಸ್ಥೆಯ ಕಾರ್ಯದರ್ಶಿ ಟಿ. ಅನಂತರಾಜು ಅವರಲ್ಲಿ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080–22275656 ಸಂಖ್ಯೆಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.