ಜೂನಿಯರ್‌ ಹಾಕಿ ಆಟಗಾರ ರಾಜೀವ್‌ ಮಿಶ್ರಾ ಸಾವು ನವದೆಹಲಿ: ಭಾರತ ಜೂನಿ ಯರ್‌ ಹಾಕಿ ತಂಡದ ಮಾಜಿ ಆಟಗಾರ ರಾಜೀವ್‌ ಮಿಶ್ರಾ (46) ಅನುಮಾನಾ ಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ವಾರಾಣಸಿಯ ಸರ್‌ಸೌಲಿ ಪ್ರದೇಶದಲ್ಲಿರುವ ಮನೆಯಲ್ಲಿ ಬುಧವಾರ ಮೃತದೇಹ ಪತ್ತೆಯಾಗಿದೆ. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ರಾಜೀವ್‌, 1997ರಲ್ಲಿ ಲಂಡನ್‌ನಲ್ಲಿ ನಡೆದಿದ್ದ ಜೂನಿಯರ್‌ ವಿಶ್ವಕಪ್‌ ಹಾಕಿ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿ, ಪ್ರಸಿದ್ಧಿಗೆ ಬಂದಿದ್ದರು. ಆ ಬಳಿಕ ಗಾಯದ ಸಮಸ್ಯೆಯಿಂದ ಸೀನಿಯರ್‌ ತಂಡದಲ್ಲಿ ಅವಕಾಶ ದೊರೆತಿರಲಿಲ್ಲ. ‘ರಾಜೀವ್‌ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಅವರು ಕೆಲ ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ’ ಎಂದು ಮೂಲಗಳು ತಿಳಿಸಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.