ಹಾಕಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹರ್ಮನ್‌ಪ್ರೀತ್‌ಗೆ ನಾಯಕತ್ವ ನವದೆಹಲಿ: ಅನುಭವಿ ಡ್ರ್ಯಾಗ್‌ಫ್ಲಿಕರ್ ಹರ್ಮನ್‌ಪ್ರೀತ್ ಸಿಂಗ್ ಅವರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಲಿರುವ ಭಾರತ ಹಾಕಿ ತಂಡಕ್ಕೆ ನಾಯಕರಾಗಿ ನೇಮಕಗೊಂಡಿದ್ದಾರೆ. ನವೆಂಬರ್ 26ರಿಂದ ನಡೆಯಲಿರುವ ಸರಣಿಗೆ 23 ಮಂದಿಯ ತಂಡವನ್ನು ಮಂಗಳವಾರ ಹಾಕಿ ಇಂಡಿಯಾ ಪ್ರಕಟಿಸಿದೆ. ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್‌ ಟೂರ್ನಿಯ ಪೂರ್ವಸಿದ್ಧತೆಯಾಗಿ ಈ ಸರಣಿ ನಡೆಯಲಿದ್ದು, ಐದು ಪಂದ್ಯಗಳು ನಿಗದಿಯಾಗಿವೆ. ಜನವರಿ 13ರಿಂದ 29ರವರೆಗೆ ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ವಿಶ್ವಕಪ್ ನಡೆಯಲಿದೆ. ಭಾರತ ತಂಡಕ್ಕೆ ಅಮಿತ್ ರೋಹಿದಾಸ್ ಉಪನಾಯಕರಾಗಿದ್ದಾರೆ. ಭಾರತ ತಂಡ:ಗೋಲ್‌ಕೀಪರ್ಸ್: ಕೃಷ್ಣ ಬಹದ್ದೂರ್ ಪಾಠಕ್, ಶ್ರೀಜೇಶ್ ಪಿ.ಆರ್‌. ಡಿಫೆಂಡರ್ಸ್: ಜರ್ಮನ್‌ಪ್ರೀತ್ ಸಿಂಗ್‌, ಸುರೇಂದರ್ ಕುಮಾರ್, ಹರ್ಮನ್ಪ್ರೀತ್ ಸಿಂಗ್ (ನಾಯಕ), ಅಮಿತ್ ರೋಹಿದಾಸ್ (ಉಪನಾಯಕ), ಜುಗರಾಜ್‌ ಸಿಂಗ್, ಮನದೀಪ್‌ ಮೋರ್, ನೀಲಮ್ ಸಂಜೀಪ್ ಕ್ಸೆಸ್, ವರುಣ್ ಕುಮಾರ್ ಮಿಡ್‌ಫೀಲ್ಡರ್ಸ್: ಸುಮಿತ್, ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್, ಶಂಶೇರ್ ಸಿಂಗ್, ನೀಲಕಂಠ ಶರ್ಮಾ, ರಾಜ್‌ಕುಮಾರ್ ಪಾಲ್, ಮೊಹಮ್ಮದ್ ರಾಹೀಲ್ ಮೌಸೀನ್, ಆಕಾಶದೀಪ್ ಸಿಂಗ್, ಗುರ್ಜಂತ್ ಸಿಂಗ್ ಫಾರ್ವರ್ಡ್ಸ್: ಮನ್‌ದೀಪ್ ಸಿಂಗ್, ಅಭಿಷೇಕ್, ದಿಲ್‌ಪ್ರೀತ್ ಸಿಂಗ್, ಸುಖಜೀತ್ ಸಿಂಗ್. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.