ಹಾಕಿ: ಐಡಿಯಲ್‌ ಅಕಾಡೆಮಿಗೆ ಜಯ ಬೆಂಗಳೂರು: ಐಡಿಯಲ್‌ ಸ್ಪೋರ್ಟ್ಸ್‌ ಅಕಾಡೆಮಿ ತಂಡದವರು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದ ‘ಸಿ’ ಡಿವಿಷನ್‌ ಲೀಗ್‌ ಹಾಕಿ ಟೂರ್ನಿಯಲ್ಲಿ ಗೆದ್ದರು. ಶುಕ್ರವಾರ ನಡೆದ ಪಂದ್ಯದಲ್ಲಿ ಐಡಿಯಲ್‌ ಅಕಾಡೆಮಿ 3–0 ಗೋಲುಗಳಿಂದ ಕಾವೇರಿ ಸ್ಪೋರ್ಟ್ಸ್‌ ಕ್ಲಬ್‌ ತಂಡವನ್ನು ಮಣಿಸಿತು. ವಿಜಯಿ ತಂಡದ ಶಿವ ಶಂಕರನ್‌ (27 ಮತ್ತು 28ನೇ ನಿ.) ಎರಡು ಗೋಲುಗಳನ್ನು ಗಳಿಸಿದರೆ, ಇನ್ನೊಂದು ಗೋಲನ್ನು ಮಣಿ ಭರತ್ 48ನೇ ನಿ. ದಲ್ಲಿ ತಂದಿತ್ತರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.