ಪೊಲೀಸ್‌ ಕ್ರೀಡಾಕೂಟ: ಕರ್ನಾಟಕಕ್ಕೆ 8 ಕಂಚು ಬೆಂಗಳೂರು: ನವದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಪೊಲೀಸ್ ಜೂಡೋ ಕ್ಲಸ್ಟರ್‌ ಕ್ರೀಡಾಕೂಟದ ಪೆಂಕಾಕ್ ಸಿಲತ್ ಮತ್ತು ಫೆನ್ಸಿಂಗ್ ಕ್ರೀಡೆಗಳಲ್ಲಿಕರ್ನಾಟಕ ತಂಡವು ಒಟ್ಟು ಎಂಟು ಕಂಚಿನ ಪದಕ ಗೆದ್ದುಕೊಂಡಿದೆ. ಕರ್ನಾಟಕ ಪೊಲೀಸ್ ಇಲಾಖೆಯು ಕೂಟದಲ್ಲಿ ಎಂಟು ಪದಕ ಜಯಿಸಿರುವುದು ಇದೇ ಮೊದಲ ಸಲವಾಗಿದೆ. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಟ್ವೀಟ್ ಮಾಡಿ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.