ಪ್ಯಾರಾ ಬ್ಯಾಡ್ಮಿಂಟನ್‌: ಕರ್ನಾಟಕ ಆಟಗಾರರಿಗೆ ಮೂರು ಚಿನ್ನ ಬೆಂಗಳೂರು: ಕರ್ನಾಟಕದ ಪ್ಯಾರಾ ಬ್ಯಾಡ್ಮಿಂಟನ್ ಪಟುಗಳು ಉಗಾಂಡದ ಕಂಪಾಲದಲ್ಲಿ ನಡೆದ ಪ್ಯಾರಾ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂರು ಚಿನ್ನ ಮತ್ತು ಐದು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಟೂರ್ನಿಯು ಇದೇ 13ರಿಂದ 18ರವರೆಗೆ ನಡೆದಿತ್ತು. ಕರ್ನಾಟಕ ಪ್ಯಾರಾ ಬ್ಯಾಡ್ಮಿಂಟನ್ ಸಂಸ್ಥೆಯ ಕಾರ್ಯದರ್ಶಿ ಕೆ.ವೈ. ವೆಂಕಟೇಶ್ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.