ರಾಯಲ್‌ ಚಾಲೆಂಜರ್ಸ್‌ ಅನ್‌ಬಾಕ್ಸ್ 19ರಂದು ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರ್ ತಂಡದ ಅನ್‌ಬಾಕ್ಸ್ ಕಾರ್ಯಕ್ರಮವು ಇದೇ 19ರಂದು ನಡೆಯಲಿದೆ. ಈ ಸಂದರ್ಭದಲ್ಲಿ ತಂಡದ ಹೆಸರಿನಲ್ಲಿ ಬೆಂಗಳೂರ್ ಪದವನ್ನು ಬೆಂಗಳೂರು ಎಂದು ಬದಲಾವಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ಅಂದು ಸಂಜೆ 4 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ತಂಡದ ಆಟಗಾರರೆಲ್ಲರೂ ಅಭ್ಯಾಸ ನಡೆಸುವರು. ತಂಡದ 12ನೇ ಪ್ಲೇಯರ್ ಆರ್ಮಿ (ಅಭಿಮಾನಿಗಳು)ಯೊಂದಿಗೆ ಬಾಂಧವ್ಯ ಬೆಸೆಯುವ ಕಾರ್ಯಕ್ರಮ ಇದಾಗಿದೆ. ಕಳೆದ ಮೂರು ವರ್ಷಗಳಿಂದ ಆರ್‌ಸಿಬಿ ಯು ಈ ಕಾರ್ಯಕ್ರಮ ಮಾಡುತ್ತಿದೆ. ಅಭಿಮಾನಗಳೂ ತಮ್ಮ ನೆಚ್ಚಿನ ಆಟಗಾರರನ್ನು ಹತ್ತಿರದಿಂದ ನೋಡುವ ಅವಕಾಶ ಪಡೆಯಲಿದ್ದಾರೆ. ಅನ್‌ಬಾಕ್ಸ್‌ ವೀಕ್ಷಿಸಲು ಟಿಕೆಟ್ ಖರೀದಿಸಬೇಕು. ಆರ್‌ಸಿಬಿಯ ವೆಬ್‌ಸೈಟ್‌ನಲ್ಲಿ ಟಿಕೆಟ್‌ಗಳು ಲಭ್ಯ ಇವೆ. ₹ 800 ರಿಂದ ಆರಂಭಿಕ ದರಗಳನ್ನು ನಿಗದಿಪಡಿಸಲಾಗಿದೆ. ಹೋದ ವರ್ಷ ನಡೆದಿದ್ದ ಅನ್‌ಬಾಕ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಮತ್ತು ವೆಸ್ಟ್ಇಂಡೀಸ್‌ನ ಕ್ರಿಸ್ ಗೇಲ್ ಅವರು ಹಾಜರಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.