2024 : ಆರ್‌ಸಿಬಿ ತಂಡದ ಮೊದಲ ಐದು ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಹಂತದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಅವಧಿಯಲ್ಲಿ 10 ನಗರಗಳಲ್ಲಾಗಿ ಒಟ್ಟು 21 ಪಂದ್ಯಗಳು ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಮಾರ್ಚ್ 25ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಳಾಪಟ್ಟಿ ಇಲ್ಲಿದೆ (ಮೊದಲ 5 ಪಂದ್ಯ): ಮಾರ್ಚ್ 22: ಆರ್‌ಸಿಬಿ ಚೆನ್ನೈ (ತಾಣ: ಚೆನ್ನೈ) ಮಾರ್ಚ್ 25: ಆರ್‌ಸಿಬಿ ಪಂಜಾಬ್ (ತಾಣ: ಬೆಂಗಳೂರು) ಮಾರ್ಚ್ 29: ಆರ್‌ಸಿಬಿ ಕೋಲ್ಕತ್ತ (ತಾಣ: ಬೆಂಗಳೂರು) ಏಪ್ರಿಲ್ 02: ಆರ್‌ಸಿಬಿ ಲಖನೌ (ತಾಣ: ಬೆಂಗಳೂರು) ಏಪ್ರಿಲ್ 06: ಆರ್‌ಸಿಬಿ ರಾಜಸ್ಥಾನ (ತಾಣ: ಜೈಪುರ) ಐಪಿಎಲ್ 2024: ಮೊದಲ 21 ಪಂದ್ಯಗಳ ವೇಳಾಪಟ್ಟಿ: ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.