ಸಾನಿಯಾ ಜತೆ ವಿಚ್ಛೇದನ ವದಂತಿ: ಪಾಕ್ ನಟಿ ಜಾವೇದ್ ವರಿಸಿದ ಶೋಯಬ್‌ ಮಲಿಕ್‌ ನವದೆಹಲಿ: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಮಲಿಕ್ ಅವರು ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಸನಾ ಜಾವೇದ್ ಅವರೊಂದಿಗೆ ಹಸೆಮಣೆ ಏರಿರುವ ಫೋಟೊಗಳನ್ನು ಶೋಯಬ್ ಮಲಿಕ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಇತ್ತೀಚೆಗೆ ಹರಿದಾಡಿದ್ದವು. ಬುಧವಾರವಷ್ಟೇ ಸಾನಿಯಾ ಮಿರ್ಜಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದು ಇದಕ್ಕೆ ಪುಷ್ಠಿ ನೀಡುವಂತಿತ್ತು. (@) ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.