: ಅಫ್ಗಾನಿಸ್ತಾನ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಬೆಂಗಳೂರು: ಭಾರತ ಮತ್ತು ಅಫ್ಗಾನಿಸ್ತಾನ ತಂಡಗಳ ನಡುವಿನ ಮೂರನೇ ‘ಚುಟುಕು’ ಪಂದ್ಯ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ದುಕೊಂಡಿದೆ. ಮೂರು ಪಂದ್ಯಗಳ ಸರಣಿಯನ್ನು ಆತಿಥೇಯರು ಈಗಾಗಲೇ 2–0ಯಿಂದ ಕೈವಶ ಮಾಡಿಕೊಂಡಿದ್ದಾರೆ. ಭಾರತಕ್ಕೆ ಕ್ಲೀನ್‌ಸ್ವೀಪ್ ಮಾಡಿಕೊಳ್ಳುವ ಅವಕಾಶ ಇದೆ. ಈ ಪಂದ್ಯದಲ್ಲಿ ಭಾರತದ ಪರವಾಗಿ ಆವೇಶ್‌ ಖಾನ್‌, ಸಂಜು ಸ್ಯಾಮ್ಸನ್‌ ಹಾಗೂ ಕುಲದೀಪ್‌ ಸ್ಥಾನ ಪಡೆದಿದ್ದಾರೆ. ಅಫ್ಗಾನಿಸ್ತಾನ ಕೂಡ ಈ ಪಂದ್ಯ ಗೆಲ್ಲುವ ಒತ್ತಡದಲ್ಲಿದೆ. 🚨 🚨 3⃣ #' 👌👌 ▶️ ://./# | @ ../xsjfKPW4p5 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.