| ಮೊದಲ ಪಂದ್ಯಕ್ಕೆ ಕೊಹ್ಲಿ ಅಲಭ್ಯ: ದ್ರಾವಿಡ್ ಮೊಹಾಲಿ: ಅಫ್ಗಾನಿಸ್ತಾನ ವಿರುದ್ಧ ಗುರುವಾರ ನಡೆಯಲಿರುವ ಮೊದಲ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡುವುದಿಲ್ಲ ಎಂದು ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ಭಾರತ ಹಾಗೂ ಅಫ್ಗಾನಿಸ್ತಾನ ನಡುವಣ ಮೊದಲ ಟಿ20 ಪಂದ್ಯವು ಮೊಹಾಲಿಯಲ್ಲಿ ಗುರುವಾರ (ನಾಳೆ) ನಡೆಯಲಿದೆ. ವೈಯಕ್ತಿಕ ಕಾರಣದಿಂದಾಗಿ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ಆದರೆ ಎರಡು ಹಾಗೂ ಅಂತಿಮ ಪಂದ್ಯದಲ್ಲಿ ಆಡಲಿದ್ದಾರೆ ಎಂದು ದ್ರಾವಿಡ್ ಹೇಳಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2022ರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಕೊನೆಯದಾಗಿ ಅಂತರರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದರು. ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿದ್ದ ಭಾರತದ ಟ್ರೋಫಿ ಕನಸು ಭಗ್ನಗೊಂಡಿತ್ತು. ಸುಮಾರು 14 ತಿಂಗಳ ನಂತರ ಈಗ ಅಫ್ಗಾನಿಸ್ತಾನ ವಿರುದ್ಧದ ಟಿ20 ಸರಣಿಗೆ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.