ಟೆಸ್ಟ್‌ ಕ್ರಿಕೆಟ್‌ಗೆ ಕ್ಲಾಸೆನ್ ವಿದಾಯ ಪ್ರಿಟೋರಿಯಾ: ದಕ್ಷಿಣ ಆಫ್ರಿಕಾದ ವಿಕೆಟ್‌ ಕೀಪರ್‌– ಬ್ಯಾಟರ್‌ ಹೆನ್ರಿಚ್‌ ಕ್ಲಾಸೆನ್‌ ಅವರು ಅಲ್ಪಾವಧಿಯ ಟೆಸ್ಟ್‌ ಕ್ರಿಕೆಟ್‌ಗೆ ಸೋಮವಾರ ವಿದಾಯ ಹೇಳಿದ್ದಾರೆ. 2019ರಲ್ಲಿ ರಾಂಚಿಯಲ್ಲಿ ಭಾರತ ವಿರುದ್ಧ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಕ್ಲಾಸೆನ್ ನಾಲ್ಕು ಟೆಸ್ಟ್‌ಗಳನ್ನಷ್ಟೇ ಆಡಿದ್ದಾರೆ. ಕಳೆದ ವರ್ಷ ಜೊಹಾನೆಸ್‌ಬರ್ಗ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಕೊನೆಯ ಪಂದ್ಯ ಆಡಿದ್ದರು. 32 ವರ್ಷದ ಕ್ಲಾಸೆನ್ 13ರ ಸರಾಸರಿಯಲ್ಲಿ 104 ರನ್‌ ಗಳಿಸಿದ್ದು, ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ ಗಳಿಸಿದ್ದ 35 ರನ್‌ ಅತ್ಯಧಿಕವಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.