1st T20I: ಲಂಕಾ ವಿರುದ್ಧ ಭಾರತಕ್ಕೆ 43 ರನ್‌ಗಳ ಜಯ ಪೆಲೆಕೆಲೆ: ಟೀಮ್ ಇಂಡಿಯಾ, ಅತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಗೆಲುವು ದಾಖಲಿಸಿದೆ. ಭಾರತ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 213 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಗುರಿ ತಲುಪುವಲ್ಲಿ ವಿಫಲವಾದ ಶ್ರೀಲಂಕಾ 19.2 ಓವರ್‌ಗಳಲ್ಲಿ ಎಲ್ಲ ವಿಕೆಟ್‌ ಕಳೆದುಕೊಂಡು 170 ರನ್‌ ಗಳಿಸಿ ಸೋಲುಂಡಿತು. ಈ ಮೂಲಕ ಭಾರತ ಮೊದಲ ಪಂದ್ಯದಲ್ಲಿ 43 ರನ್‌ಗಳ ಜಯ ದಾಖಲಿಸಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.