2nd : ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಕೇಪ್ ಟೌನ್: ಭಾರತ ವಿರುದ್ಧದ 2ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಅವರು ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೊದಲ ಪಂದ್ಯ ಗೆದ್ದಿರುವ ಆಫ್ರಿಕಾ ಈ ಪಂದ್ಯವನ್ನೂ ಗೆದ್ದು, ಸರಣಿ ಗೆಲುವು ದಾಖಲಿಸುವ ತವಕದಲ್ಲಿದ್ದರೆ, ಭಾರತ ತಂಡ ಈ ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸುವ ಉತ್ಸಾಹದಲ್ಲಿದೆ. ಟ್ರಿಸ್ಟಾನ್ ಸ್ಟಬ್ಸ್‌ ಅವರು ಈ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಸ್ಪಿನ್ನರ್ ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ ತಂಡಕ್ಕೆ ಹಿಂದಿರುಗಿದ್ದಾರೆ. ಫಿಟ್ ಆಗಿರುವ ಜಡೇಜಾ ಭಾರತ ತಂಡಕ್ಕೆ ಮರಳಿದ್ದಾರೆ. ಪ್ರಸಿದ್ಧ ಕೃಷ್ಣ 11ರ ಬಳಗದಲ್ಲಿ ಸ್ಥಾನ ಉಳಿಸಿಕೊಂಡಿದ್ದು, ಶಾರ್ದೂಲ್ ಠಾಕೂರ್ ತಂಡದಿಂದ ಹೊರಗುಳಿದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.