: ಭಾರತ ತಂಡದಲ್ಲಿ ದೀಪಕ್ ಚಾಹರ್ ಬದಲಿಗೆ ಆಕಾಶ್‌ ದೀಪ್‌ಗೆ ಸ್ಥಾನ ಬೆಂಗಳೂರು: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾದಲ್ಲಿ ಸಣ್ಣ ಬದಲಾವಣೆ ಮಾಡಿರುವ ಬಿಸಿಸಿಐ, ಬೌಲರ್ ದೀಪಕ್ ಚಾಹರ್ ಬದಲಿಗೆ ಆಕಾಶ್‌ ದೀಪ್‌ ಅವರನ್ನು ಆಯ್ಕೆ ಮಾಡಿದೆ. ಚಾಹರ್ ಕುಟುಂಬದ ಸದಸ್ಯರೊಬ್ಬರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರು ತವರಿನಲ್ಲೇ ಉಳಿದಿದ್ದಾರೆ. ಅವರ ಬದಲಿಗೆ ಬಂಗಾಳದ ಮಧ್ಯಮ ವೇಗಿ ಆಕಾಶ್‌ ದೀಪ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ’ | ; ’ : , , , , , , ()(), (), , , ,… ../Z8jRukpmmB ಮೊಹಮ್ಮದ್ ಶಮಿ ದೈಹಿಕವಾಗಿ ಫಿಟ್‌ ಆಗದಿದ್ದರಿಂದ ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ. ಏಕದಿನ ಪಂದ್ಯಗಳಿಗೆ ಕೆ.ಎಲ್ ರಾಹುಲ್ ನಾಯಕರಾಗಿದ್ದಾರೆ. ಏಕದಿನ ತಂಡ ಇಂತಿದೆ: ಕೆ.ಎಲ್. ರಾಹುಲ್ (ನಾಯಕ), ಋತುರಾಜ್ ಗಾಯಕವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟೀದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಮುಕೇಶ್ ಕುಮಾರ್, ಆವೇಶ್ ಖಾನ್, ಅರ್ಶದೀಪ್ ಸಿಂಗ್ ಮತ್ತು ಆಕಾಶ್‌ ದೀಪ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.