ಟಿ20 ಕ್ರಿಕೆಟ್ | ಭಾರತ ಮಹಿಳಾ ತಂಡಕ್ಕೆ ಮತ್ತೆ ಸೋಲು: ಇಂಗ್ಲೆಂಡ್‌ಗೆ ಸರಣಿ ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಇಂದು ನಡೆದ ಎರಡನೇ ಟಿ20 ಪಂದ್ಯದಲ್ಲೂ ಗೆಲುವು ಸಾಧಿಸಿದ ಇಂಗ್ಲೆಂಡ್‌, ಮೂರು ಪಂದ್ಯಗಳ ಟಿ20 ಸರಣಿಯನ್ನು 2–0 ಅಂತರದಿಂದ ವಶಪಡಿಸಿಕೊಂಡಿತು. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಕೇವಲ 80 ರನ್‌ ಗಳಿಸಿ ಆಲೌಟ್‌ ಆಯಿತು. ಜೆಮಿಮಾ ರಾಡ್ರಿಗಸ್‌ (30) ಮತ್ತು ಸ್ಮೃತಿ ಮಂದಾನ (10) ಹೊರತುಪಡಿಸಿ ಯಾವೊಬ್ಬ ಬ್ಯಾಟರ್‌ ಎರಡಂಕಿ ಮೊತ್ತ ಗಳಿಸಲಿಲ್ಲ. ಇಂಗ್ಲೆಂಡ್ ಪರ ಚಾರ್ಲೊಟ್ ಡೀನ್‌, ಲೌರೆನ್‌ ಬೆಲ್‌, ಎಕ್ಲೆಸ್ಟೋನ್‌ ಹಾಗೂ ಸಾರಾ ಗ್ಲೆನ್‌ ತಲಾ ಎರಡು ವಿಕೆಟ್‌ ಪಡೆದರು. ಬಳಿಕ ಸುಲಭ ಗುರಿ ಬೆನ್ನತ್ತಿದ ಪ್ರವಾಸಿ ಪಡೆ, ಇನ್ನೂ 8.4 ಓವರ್‌ ಬಾಕಿ ಇರುವಂತೆಯೇ 82 ರನ್‌ ಗಳಿಸಿ 4 ವಿಕೆಟ್‌ ಅಂತರದ ಜಯ ಗಳಿಸಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.