3rd T20I: ಋತುರಾಜ್ ಚೊಚ್ಚಲ ಶತಕ; ಭಾರತ 222/3 ಗುವಾಹಟಿ: ಋತುರಾಜ್ ಗಾಯಕವಾಡ ಅಜೇಯ ಶತಕದ (123*) ಬೆಂಬಲದೊಂದಿಗೆ ಟೀಮ್ ಇಂಡಿಯಾ, ಇಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. 24 ರನ್ನಿಗೆ ಎರಡು ವಿಕೆಟ್ ಕಳೆದುಕೊಂಡಿದ್ದ ಭಾರತ ಆರಂಭಿಕ ಆಘಾತಕ್ಕೆ ಒಳಗಾಯಿತು. ಯಶಸ್ವಿ ಜೈಸ್ವಾಲ್ (6) ಹಾಗೂ ಇಶಾನ್ ಕಿಶನ್ (0) ವೈಫಲ್ಯರಾದರು. ನಾಯಕ ಸೂರ್ಯಕುಮಾರ್ ಯಾದವ್ 39 ರನ್‌ಗಳ ಉಪಯುಕ್ತ ಇನಿಂಗ್ಸ್ ಕಟ್ಟಿದರು. ಮತ್ತೊಂದೆಡೆ ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಋತುರಾಜ್ ಕೊನೆಯ ಹಂತದಲ್ಲಿ ಅಬ್ಬರಿಸಿದರು. - @Ruutu1331 . 👇👇# @ ../BXnQlOAMB0 ಅಲ್ಲದೆ 52 ಎಸೆತಗಳಲ್ಲಿ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಗಳಿಸಿದರು. ಆ ಮೂಲಕ ಭಾರತ ಬೃಹತ್ ಮೊತ್ತ ಪೇರಿಸಲು ನೆರವಾದರು. 57 ಎಸೆತಗಳನ್ನು ಎದುರಿಸಿದ ಋತುರಾಜ್ 123 ರನ್ ಗಳಿಸಿ ಅಜೇಯರಾಗುಳಿದರು. ಋತುರಾಜ್ ಇನಿಂಗ್ಸ್‌ನಲ್ಲಿ 13 ಬೌಂಡರಿ ಹಾಗೂ ಏಳು ಸಿಕ್ಸರ್‌ಗಳು ಸೇರಿದ್ದವು. ಋತುರಾಜ್ ಅವರು ಮುರಿಯದ ನಾಲ್ಕನೇ ವಿಕೆಟ್‌ಗೆ ತಿಲಕ್ ವರ್ಮಾ (31*)ಜೊತೆ 141 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ! 123 57 @Ruutu1331 # 222/3. - ://./IGWiF2zrJ7… # @ ../7rBFgifEBk T20I @Ruutu1331 🔥🔥 # @ ../FUxyBLEE3q ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ... ಈ ಮೊದಲು ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯವನ್ನೂ ಗೆದ್ದು ಸರಣಿ ಗೆಲ್ಲುವ ಗುರಿ ಇರಿಸಿಕೊಂಡಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ಮುಕೇಶ್ ಕುಮಾರ್ ಸ್ಥಾನದಲ್ಲಿ ಆವೇಶ್ ಖಾನ್ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ತಿರುಗೇಟು ನೀಡುವ ಇರಾದೆಯಲ್ಲಿದೆ. ಆದರೆ ತಂಡದಲ್ಲಿ ಹಲವು ಬದಲಾವಣೆ ಕಂಡುಬಂದಿದೆ. ' #' T20I 👌👌 . ▶️ ://./# | # | @ ../Rk9mbjTuZu 🚨 🚨 . ▶️ ://./# | # | @ ../ZA4pH9wR3Y ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.