2024: ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡದ ಮೆಂಟರ್ ಆಗಿ ಗೌತಮ್‌ ಗಂಭೀರ್‌ ನೇಮಕ ನವದೆಹಲಿ: ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡದ ಮೆಂಟರ್ ಆಗಿ ಹಿರಿಯ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರು ಇಂದು ನೇಮಕಗೊಂಡಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡವನ್ನು ಮುನ್ನಡೆಸಿದ್ದ ಗಂಭೀರ್‌, 2012 ಹಾಗೂ 2014ರಲ್ಲಿ ತಂಡವನ್ನು ಚಾಂಪಿಯನ್‌ ಆಗಿಸಿದ್ದರು. ಕಳೆದ ಎರಡು ಆವೃತ್ತಿಗಳಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್‌ ಆಗಿದ್ದರು. ಬಾಲಿವುಡ್ ನಟ ಶಾರುಖ್ ಖಾನ್ ಸಹ-ಮಾಲೀಕತ್ವದ ಕೆಕೆಆರ್‌ ಫ್ರಾಂಚೈಸಿಗೆ ಮೆಂಟರ್ ಆಗಿ ಮರಳಲು ಗಂಭೀರ್‌ ಸಿದ್ಧರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ‘ಪಿಟಿಐ’ ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.