ನ.1ರಂದು ವಾಂಖೆಡೆಯಲ್ಲಿ ಸಚಿನ್ ಅವರ ಆಳೆತ್ತರದ ಪ್ರತಿಮೆ ಅನಾವರಣ ಮುಂಬೈ: ಮುಂಬೈ ನಗರದ ಪ್ರತಿಷ್ಠಿತ ವಾಂಖೆಡೆ ಕ್ರೀಡಾಂಗಣದಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪ್ರತಿಮೆ ಉದ್ಘಾಟನೆಗೆ ಸಮಯ ಕೂಡಿ ಬಂದಿದೆ. ನವೆಂಬರ್ 1ರಂದು ಪ್ರತಿಮೆ ಅನಾವರಣಗೊಳ್ಳಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ವಾಖೆಂಡೆ ಕ್ರೀಡಾಂಗಣದಲ್ಲಿ ಸಚಿನ್ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ನವೆಂಬರ್ 1ರಂದು ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಉದ್ಘಾಟನೆ ನಡೆಯಲಿದೆ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಶನ್(ಎಂಸಿಎ) ಅಧ್ಯಕ್ಷ ಅಮೋಲ್ ಕಾಳೆ ಹೇಳಿದ್ದಾರೆ. 'ತೆಂಡೂಲ್ಕರ್ ಅವರ ಪ್ರತಿಮೆಯ ಉದ್ಘಾಟನಾ ಸಮಾರಂಭದಲ್ಲಿ ಟೀಮ್ ಇಂಡಿಯಾ ಸದಸ್ಯರು ಮತ್ತು ಸ್ವತಃ ಸಚಿನ್ ತೆಂಡೂಲ್ಕರ್ ಭಾಗಿಯಾಗಲಿದ್ದಾರೆ. ಶೀಘ್ರದಲ್ಲೇ ಔಪಚಾರಿಕ ಆಹ್ವಾನದಲ್ಲಿ ಹೆಚ್ಚಿನ ವಿವರಗಳನ್ನು ನಾವು ಬಹಿರಂಗಪಡಿಸುತ್ತೇವೆ’ಎಂದು ಕಾಳೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. # | | " ( ) . 1st ... - ," 2011 … ../14PE0opnAp ವಾಂಖೆಡೆಯಲ್ಲಿ ಸಚಿನ್ ಅವರ ಆಳೆತ್ತರದ ಪ್ರತಿಮೆಯನ್ನು ಸ್ಥಾಪಿಸಲು ಯೋಜಿಸುತ್ತಿದ್ದೇವೆ ಎಂದು ಅಮೋಲ್ ಕಾಳೆ ಅವರು ಫೆಬ್ರುವರಿಯಲ್ಲಿ ಘೋಷಿಸಿದ್ದರು. ಈ ವರ್ಷ 50ನೇ ವರ್ಷಕ್ಕೆ ಕಾಲಿಟ್ಟಿರುವ ಕ್ರಿಕೆಟ್ ಐಕಾನ್‌ ಸಚಿನ್ ಅವರಿಗೆ ಇದು ವಿಶೇಷ ಉಡುಗೊರೆಯಾಗುತ್ತದೆ. 2011ರ ವಿಶ್ವಕಪ್ ಗೆಲುವಿನ ಸ್ಮರಣೆಗಾಗಿ ನಿರ್ಮಿಸಿರುವ ಈ ಪ್ರತಿಮೆಯನ್ನು ಏಕದಿನ ವಿಶ್ವಕಪ್ ಸಮಯದಲ್ಲೇ ಉದ್ಘಾಟಿಸಲಾಗುತ್ತಿದೆ ಎಂದೂ ಅವರು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.