2023: ಗಾಯಾಳು ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಅಲಭ್ಯ ಬೆಂಗಳೂರು: ಗಾಯದ ಸಮಸ್ಯೆಗೆ ತುತ್ತಾಗಿರುವ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ, ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿ ನೀಡಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ಅಕ್ಟೋಬರ್ 22, ಭಾನುವಾರದಂದು ಧರ್ಮಶಾಲಾದಲ್ಲಿ ನಡೆಯಲಿದೆ. ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ತಮ್ಮದೇ ಬೌಲಿಂಗ್‌ನಲ್ಲಿ ಚೆಂಡನ್ನು ಕಾಲಿನಿಂದ ತಡೆಯಲು ಯತ್ನಿಸಿದ ವೇಳೆ ಕಾಲು ಉಳುಕಿಸಿಕೊಂಡು ಗಾಯಕ್ಕೆ ತುತ್ತಾಗಿದ್ದರು. ತಕ್ಷಣ ಹಾರ್ದಿಕ್‌ಗೆ ಫಿಸಿಯೊ ನೆರವು ಒದಗಿಸಿದರು. ಬಳಿಕ ಸ್ಕ್ಯಾನಿಂಗ್‌ಗೆ ಒಳಪಡಿಸಿ ವಿಶ್ರಾಂತಿ ಸೂಚಿಸಲಾಯಿತು. ಬಿಸಿಸಿಐನ ವೈದ್ಯಕೀಯ ತಂಡವು ಹಾರ್ದಿಕ್ ಮೇಲೆ ನಿಗಾ ವಹಿಸಿದೆ. ಅಕ್ಟೋಬರ್ 29ರಂದು ಲಖನೌದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. 🚨 🚨 : 🔽 #CWC23 | #://./yiCbi3ng8u ಹಾರ್ದಿಕ್ ಪಾಂಡ್ಯಗೆ ಗಾಯ (ರಾಯಿಟರ್ಸ್ ಚಿತ್ರ) ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.