T20 : ಭಾರತ, ಆಸ್ಟ್ರೇಲಿಯಾ ಪಂದ್ಯದ ಪ್ರಮುಖ ಹೈಲೈಟ್ಸ್‌... ಗ್ರಾಸ್‌ ಐಲೆಟ್‌, ಸೇಂಟ್‌ ಲೂಸಿಯಾ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಜೇಯ ಓಟ ಮುಂದುವರಿಸಿದ ಭಾರತ ತಂಡ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಇಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತ ತಂಡ ಮಣಿಸಿತು. ಈ ಪಂದ್ಯದ ಪ್ರಮುಖ ಹೈಲೈಟ್ಸ್‌ ಇಲ್ಲಿದೆ... ಈ ಪಂದ್ಯದಲ್ಲಿ ರೋಹಿತ್ ಕೇವಲ 41 ಎಸೆತಗಳಲ್ಲಿ ಏಳು ಬೌಂಡರಿ, ಎಂಟು ಸೊಗಸಾದ ಸಿಕ್ಸರ್‌ಗಳಿದ್ದ 92 ರನ್‌ ಸಿಡಿಸಿದರು. ರೋಹಿತ್‌ ಹೊಡೆದ ರನ್‌ಗಳಲ್ಲಿ ಮೊತ್ತದಲ್ಲಿ ಏಳು ಬೌಂಡರಿ, ಎಂಟು ಸೊಗಸಾದ ಸಿಕ್ಸರ್‌ಗಳಿದ್ದವು. ಈ ಪಂದ್ಯದಲ್ಲಿ ಕೊಹ್ಲಿ ಬರಿಗೈಯಲ್ಲಿ ಮರಳಿದರು. ಪಂದ್ಯದಲ್ಲಿ ಇನ್ನೊಂದೆಡೆ ಸೂರ್ಯಕುಮಾರ್ ಯಾದವ್ 31, ಶಿವಂ ದುಬೆ 28, ಹಾರ್ದಿಕ್ ಪಾಂಡ್ಯ 27 ರನ್‌ಗಳ ಕಾಣಿಕೆ ನೀಡಿದರು. ಆಸ್ಟ್ರೇಲಿಯಾ ಪರ ಜೋಶ್‌ ಹ್ಯಾಜಲ್‌ವುಡ್‌ ಪರಿಣಾಮಕಾರಿಯಾಗಿ ಬೌಲ್‌ ಮಾಡಿದರು. 4 ಓವರ್‌ಗಳಲ್ಲಿ 14 ರನ್‌ ನೀಡಿ 1 ವಿಕೆಟ್‌ ಪಡೆದರು. ಮಿಚೆಲ್‌ ಸ್ಟಾರ್ಕ್, ಮಾರ್ಕಸ್‌ ಸ್ಟೊಯಿನಿಸ್ ತಲಾ ಎರಡು ವಿಕೆಟ್‌ ಪಡೆದರು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್‌ ನೆರವಾದರು ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ. ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ 76, ಮಿಚೆಲ್ ಮಾರ್ಷ್‌ 37 ರನ್‌ ಹೊಡೆದು ಗಮನ ಸೆಳೆದರು. ಭಾರತದ ಬೌಲಿಂಗ್‌ ಪಡೆಯಲ್ಲಿ ಜಸ್‌ಪ್ರೀತ್ ಬೂಮ್ರಾ, ಆರ್ಷದೀಪ್ ಸಿಂಗ್, ಕುಲದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ಅವರ ಆಟಕ್ಕೆ ಭಾರತ ಜಯ ದಾಖಲಿಸಿತು. ಆರ್ಷದೀಪ್ ಸಿಂಗ್ 3, ಕುಲದೀಪ್ ಯಾದವ್ 2, ಜಸ್‌ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್ ತಲಾ 2 ವಿಕೆಟ್‌ ಕಬಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.