T20 2024: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ ಜಯ ಬ್ರಿಜ್‌ಟೌನ್‌: ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು, ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿತು. ಶನಿವಾರ ತಡ ರಾತ್ರಿ ನಡೆದ ‘ಬಿ’ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 36 ರನ್‌ಗಳ ಗೆಲುವು ದಾಖಲಿಸಿತು. ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 201 ರನ್‌ ಪೇರಿಸಿತು. ಆಸ್ಟ್ರೇಲಿಯಾ ಪರ ಹೆಡ್‌ 34, ವಾರ್ನರ್‌ 39, ಮಾರ್ಷ್ 35, ಸ್ಟೋಯಿನ್ಸ್‌ 30 ರನ್‌ ಹೊಡೆದರು. ಇಂಗ್ಲೆಂಡ್‌ ಪರ ಜೋರ್ಡನ್‌ 2 ವಿಕೆಟ್‌ ಪಡೆದರು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 165 ರನ್‌ ಗಳಿಸಿ ಸೋಲುಂಡಿತು. ಬಟ್ಲರ್‌ 42, ಸಾಲ್ಟ್ 37 ರನ್‌ ಗಳಿಸಿದರು. ಜಂಪ, ಕಮ್ಮಿನ್ಸ್‌ ತಲಾ 2 ವಿಕೆಟ್ ಪಡೆದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.