ಬೆಂಗಳೂರು | ಕಟ್ಟಡದಿಂದ ಜಿಗಿದು ಕ್ರಿಕೆಟಿಗ ಡೇವಿಡ್‌ ಜಾನ್ಸನ್‌ ಆತ್ಮಹತ್ಯೆ ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ, ಕನ್ನಡಿಗ ಡೇವಿಡ್‌ ಜಾನ್ಸನ್‌ (52) ಅವರು ಗುರುವಾರ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕೊತ್ತನೂರಿನ ಕನಕಶ್ರೀ ಲೇಔಟ್‌ನ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬೆಳಿಗ್ಗೆ 9.30ರ ಸುಮಾರಿಗೆ ಕೆಳಗಡೆ ಜಿಗಿದಿದ್ದಾರೆ. ಜೋರಾಗಿ ಶಬ್ದ ಬಂದ ಕಾರಣ ಭದ್ರತಾ ಸಿಬ್ಬಂದಿಯೊಬ್ಬರು ಬಂದು ನೋಡಿದಾಗ ಜಾನ್ಸನ್‌ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು. ‘ಡೇವಿಡ್‌ ಅವರು ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.