2024 | ರೈಸರ್ಸ್–ಟೈಟನ್ಸ್ ಪಂದ್ಯ ಮಳೆಯಿಂದ ರದ್ದು ಹೈದರಾಬಾದ್‌: ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಗುಜರಾತ್‌ ಟೈಟನ್ಸ್‌ ನಡುವಣದ ಪಂದ್ಯ ಮಳೆಯಿಂದ ರದ್ದಾಗಿದೆ. ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹೀಗಾಗಿ, ಟಾಸ್‌ ಇಲ್ಲದೆ ಪಂದ್ಯ ರದ್ದಾಗಿದೆ. ಟೈಟನ್ಸ್‌ ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದೆ. ಆದರೆ, ಮುಂದಿನ ಹಂತಕ್ಕೇರಲು ರೈಸರ್ಸ್‌ಗೆ ಮುಂದಿನ ಪಂದ್ಯ ನಿರ್ಣಾಯಕವಾಗಿದೆ. ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.