ನೇಪಾಳ ಕ್ರಿಕೆಟಿಗ ಸಂದೀಪ್ ಖುಲಾಸೆ ಕಠ್ಮಂಡು: ನೇಪಾಳ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ಅವರನ್ನು ಅತ್ಯಾಚಾರ ಆರೋಪದಿಂದ ಪಾಟನ್ ಹೈಕೋರ್ಟ್‌ ಮುಕ್ತಗೊಳಿಸಿದೆ. ಜನವರಿಯಲ್ಲಿ ತಮಗೆ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಲಾಮಿಚಾನೆ ಖುಲಾಸೆಗೊಂಡಿರು ವುದರಿಂದ ಟಿ20 ವಿಶ್ವಕಪ್‌ನಲ್ಲಿ ನೇಪಾಳ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.