ಟಿ–20 ವಿಶ್ವಕಪ್‌: ಕೆ.ಎಲ್‌. ರಾಹುಲ್‌ಗಿಲ್ಲ ಸ್ಥಾನ, ಹಾರ್ದಿಕ್‌ ಪಾಂಡ್ಯ ಉಪನಾಯಕ! ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ತಂಡದಲ್ಲಿ ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್ ಮತ್ತು ಸ್ಪಿನ್ನರ್ ಯಜುವೇಂದ್ರ ಚಾಹಲ್ ಸ್ಥಾನ ಗಳಿಸಿದ್ದಾರೆ. ರೋಹಿತ್ ಶರ್ಮಾ ನಾಯಕ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಉತ್ತಮವಾಗಿ ಆಡಿರುವ ಆಲ್‌ರೌಂಡರ್ ಶಿವಂ ದುಬೆ, ಅಕ್ಷರ್ ಪಟೇಲ್ ಕೂಡ ಸ್ಥಾ ನ ಗಿಟ್ಟಿಸಿದ್ದಾರೆ. ಆದರೆ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಆಯ್ಕೆ ಪರಿಗಣಿಸಿಲ್ಲ. ರಿಷಭ್ ಪಂತ್ ವಿಕೆಟ್‌ಕೀಪರ್ ಆಗಿದ್ದು, ಎರಡನೇ ವಿಕೆಟ್‌ಕೀಪರ್ ಆಗಿ ಸಂಜು ಸ್ಥಾನ ಗಳಿಸಿದ್ದಾರೆ. ಇಶಾನ್‌ ಕಿಶನ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.