ತೆಲಂಗಾಣ: ಕಬಡ್ಡಿ ವೀಕ್ಷಕರ ಗ್ಯಾಲರಿ ಕುಸಿದು 12ಕ್ಕೂ ಹೆಚ್ಚು ಮಂದಿಗೆ ಗಾಯ ಸೂರ್ಯಪೇಟೆ (ತೆಲಂಗಾಣ): ತೆಲಂಗಾಣದ ಸೂರ್ಯಪೇಟೆಯಲ್ಲಿ ನಡೆದ 47ನೇ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ನ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ. 47th # # # ../ 47ನೇ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ ಮಾರ್ಚ್ 22 ಹಾಗೂ 23ರಂದು ನಿಗದಿಯಾಗಿದೆ. ಬಾಲಕ ಹಾಗೂ ಬಾಲಕಿಯರ ತಂಡಗಳು ಭಾಗವಹಿಸುತ್ತಿವೆ. ಪಂದ್ಯವನ್ನು ನೋಡಲು ಗ್ಯಾಲರಿಯಲ್ಲಿ ಕಿಕ್ಕಿರಿದು ಜನ ಸೇರಿದ್ದರು. ಆದರೆ ತಾತ್ಕಾಲಿಕವಾಗಿ ಕಟ್ಟಲಾದ ಗ್ಯಾಲರಿಯು ಏಕಾಏಕಿ ಕುಸಿದು ಬಿದ್ದ ಪರಿಣಾಮ ಅವಘಡ ಸಂಭವಿಸಿದೆ. - . # ## # ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.