ಗಿರೀಶ್‌, ಗೀತಾಗೆ ಮುನ್ನಡೆ ಬೆಂಗಳೂರು: ಗಿರೀಶ್‌ ಗಾಬಾ ಹಾಗೂ ಗೀತಾ ಪೂಜಾರಿ ಅವರು ರಾಜ್ಯ ಟೆನ್‌ಪಿನ್ ಬೌಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಕ್ರಮವಾಗಿ ಪುರುಷ ಹಾಗೂ ಮಹಿಳಾ ವಿಭಾಗಗಳಲ್ಲಿ ಮೊದಲ ಸುತ್ತಿನ ಅಂತ್ಯಕ್ಕೆ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿನ ಚರ್ಚ್‌ಸ್ಟ್ರೀಟ್‌ನಲ್ಲಿರುವ ಅಮೀಬಾದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಮಂಗಳವಾರ ಗಿರೀಶ್ ಅವರು ಮೊದಲ ಸುತ್ತಿನ ಅಂತ್ಯಕ್ಕೆ ಒಟ್ಟು 2387 ಪಾಯಿಂಟ್ಸ್ ಗಳಿಸಿದರು. ಕಳಪೆ ಸಾಮರ್ಥ್ಯ ತೋರಿದ ಹಾಲಿ ಚಾಂಪಿಯನ್‌ ಕೃಷ್ಣ ಆರ್‌. 2315 ಪಾಯಿಂಟ್ಸ್‌ನೊಂದಿಗೆ ಎರಡನೇ ಸ್ಥಾನ ತಮ್ಮದಾಗಿಸಿಕೊಂಡರು. ಮಹಿಳಾ ವಿಭಾಗದಲ್ಲಿ ಗೀತಾ ಪೂಜಾರಿ ಅವರು ಒಟ್ಟು 2000 ಪಾಯಿಂಟ್ಸ್ ಕಲೆಹಾಕಿ ಮೊದಲ ಸ್ಥಾನ ಗಳಿಸಿದರೆ, ಸೋಮವಾರದ ಅಂತ್ಯಕ್ಕೆ ಅಗ್ರಸ್ಥಾನದಲ್ಲಿದ್ದ ಪ್ರೇಮಲ್ ಜೋವಾನ್ 1971 ಪಾಯಿಂಟ್ಸ್‌ನೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.