ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌: ಬಜರಂಗ್ ಅಲಭ್ಯ ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಬಜರಂಗ್ ಪೂನಿಯಾ ಅವರು ಈ ಬಾರಿಯ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ. ಮೊಣಕಾಲಿನ ಅಸ್ಥಿರಜ್ಜಿಗೆ ಗಾಯ ಆಗಿರುವ ಕಾರಣ ಆರು ವಾರಗಳ ವಿಶ್ರಾಂತಿ ಪಡೆಯುವಂತೆ ಅವರಿಗೆ ಸೂಚಿಸಲಾಗಿದೆ. ಅಕ್ಟೋಬರ್ ಎರಡರಿಂದ 10ರ ವರೆಗೆ ನಾರ್ವೆಯ ಓಸ್ಲೊದಲ್ಲಿ ವಿಶ್ವ ಚಾಂಪಿಯನ್‌ಷಿಪ್ ನಡೆಯಲಿದೆ. ವಿಶ್ರಾಂತಿ ಮತ್ತು ಚಿಕಿತ್ಸೆ ನಡೆಯಲಿರುವುದರಿಂದ ಇದಕ್ಕೂ ಮೊದಲು ಅವರಿಗೆ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಒಲಿಂಪಿಕ್ಸ್‌ನಲ್ಲಿ ಅವರು ತೀವ್ರ ಗಾಯಗೊಂಡಿದ್ದರು. ಇದಕ್ಕೂ ಮೊದಲು, ಜೂನ್‌ನಲ್ಲಿ ರಷ್ಯಾದಲ್ಲಿ ಸಣ್ಣ ಪ್ರಮಾಣದ ಗಾಯವಾಗಿದ್ದ ಕಾರಣ ಅವರು ಮುಂಬೈನ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.