ಕ್ವಾರಂಟೈನ್ ನಿಯಮ ಉಲ್ಲಂಘನೆ: ಬಾಕ್ಸರ್‌ಗಳ ವಿಚಾರಣೆ ನವದೆಹಲಿ: ಕೋವಿಡ್ –19ರ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ ಮೂವರು ಬಾಕ್ಸರ್‌ಗಳನ್ನು ವಿಚಾರಣೆಗೆ ಒಳಪಡಿಸಲು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ನಿರ್ಧರಿಸಿದೆ. ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ಮೇಲೆ ಮತ್ತು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ವಿಕಾಸ್ ಕೃಷ್ಣನ್‌ ಒಳಗೊಂಡಂತೆ ಈ ಮೂವರು ಪಟಿಯಾಲದ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿ (ಎನ್‌ಐಎಸ್) ಇದ್ದಾಗ ಇತರ ಅಥ್ಲೀಟ್‌ಗಳ ಜೊತೆ ಸೇರಿದ್ದರು ಎಂದು ಆರೋಪಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.