ನಿವೃತ್ತಿ ಪ್ರಕಟಿಸಿದ ರನೀಮ್‌ ಕೈರೊ: ಈಜಿಪ್ಟ್‌ನ ಸ್ಕ್ವಾಷ್‌ ತಾರೆ ರನೀಮ್‌ ಅಲ್‌ ವೆಲಿಲಿ ಅವರು ಗುರುವಾರ ನಿವೃತ್ತಿ ಪ್ರಕಟಿಸಿದ್ದಾರೆ. 31 ವರ್ಷ ವಯಸ್ಸಿನ ರನೀಮ್‌ ಅವರು ಪ್ರಸ್ತುತ ಮಹಿಳೆಯರ ಸಿಂಗಲ್ಸ್‌ ವಿಭಾಗದ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 2015ರ ಸೆಪ್ಟೆಂಬರ್‌ನಲ್ಲಿ ಮೊದಲ ಬಾರಿಗೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಪಟ್ಟಕ್ಕೇರಿದ್ದ ರನೀಮ್‌ ಅವರು 2017ರಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆದ್ದಿದ್ದರು. 2014, 2016 ಮತ್ತು 2019ರಲ್ಲಿ ನಡೆದಿದ್ದ ಚಾಂಪಿಯನ್‌ಷಿಪ್‌ಗಳಲ್ಲಿ ಅವರು ಬೆಳ್ಳಿಯ ಪದಕಗಳಿಗೆ ಕೊರಳೊಡ್ಡಿದ್ದರು. ನಾಲ್ಕು ಕಂಚಿನ ಪದಕಗಳನ್ನೂ ಜಯಿಸಿದ್ದಾರೆ. ‘ಹಿಂದಿನ 25 ವರ್ಷಗಳಿಂದಲೂ ಸ್ಕ್ವಾಷ್‌ ಕ್ರೀಡೆ ನನ್ನ ಉಸಿರಿನಲ್ಲಿ ಬೆರೆತು ಹೋಗಿದೆ. ಕ್ರೀಡಾ ಬದುಕಿಗೆ ನಿವೃತ್ತಿ ಪ್ರಕಟಿಸಲು ಇದು ಸೂಕ್ತ ಸಮಯ. ಸಾಕಷ್ಟು ಯೋಚಿಸಿಯೇ ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ರನೀಮ್‌ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.