ಇ–ಪಾಠಶಾಲಾ ಕಾರ್ಯಕ್ರಮಕ್ಕೆ ಚಾಲನೆ ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಹಾಗೂ ಭಾರತ ಆರ್ಚರಿ ಸಂಸ್ಥೆಯ (ಎಎಐ) ಅಧ್ಯಕ್ಷಅರ್ಜುನ್‌ ಮುಂಡಾ ಅವರು ಸೋಮವಾರ ಖೇಲೊ ಇಂಡಿಯಾ ಇ–ಪಾಠಶಾಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೊದಲ ದಿನ ನೆಡೆದ ವೆಬಿನಾರ್‌ನಲ್ಲಿ ಯುವ ಆರ್ಚರಿಪಟುಗಳು, ಕೋಚ್‌ಗಳು ಹಾಗೂ ತಜ್ಞರು ಪಾಲ್ಗೊಂಡಿದ್ದರು. ಅಥ್ಲೀಟ್‌ಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ಹಾಗೂ ಅಗತ್ಯ ಮಾರ್ಗದರ್ಶನ ನೀಡುವ ಉದ್ದೇಶದಿಂದ ಭಾರತೀಯ ಕ್ರೀಡಾ ಪ್ರಾಧಿಕಾರವು (ಸಾಯ್‌), ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳ (ಎನ್‌ಎಸ್‌ಎಫ್‌) ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.