ಜಿಮ್‌ಗೆ ಅವಕಾಶ ನೀಡಲು ಮನವಿ ಬೆಂಗಳೂರು: ರಾಜ್ಯದಾದ್ಯಂತ ಜಿಮ್‌ಗಳನ್ನು ತೆರೆಯಲು ಅವಕಾಶ ನೀಡಬೇಕು ಎಂದು ಮಾಜಿ ‘ಮಿಸ್ಟರ್‌ ಇಂಡಿಯಾ’ ಹಾಗೂ ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಎ.ವಿ.ರವಿ ಭಾನುವಾರ ಮನವಿ ಮಾಡಿಕೊಂಡಿದ್ದಾರೆ. ‘ರಾಜ್ಯದಾದ್ಯಂತ ಸುಮಾರು 10 ಸಾವಿರ ಜಿಮ್‌ಗಳಿದ್ದು, ಇದರಿಂದಲೇ ಆದಾಯ ನಂಬಿಕೊಂಡಿರುವ ಹೆಚ್ಚಿನ ಜಿಮ್‌ ಮಾಲಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಸೂಚಿಸುವ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಲು ಸಿದ್ಧರಿದ್ದೇವೆ’ ಎಂದು ಅವರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.