ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 5 ಲಕ್ಷ ದೇಣಿಗೆ ನೀಡಿದ ಪಿ.ವಿ.ಸಿಂಧು ನವದೆಹಲಿ (ಪಿಟಿಐ): ಭಾರತದ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಅವರು ಕೋವಿಡ್‌–19ನಿಂದ ಬಳಲುತ್ತಿರುವವರಿಗೆ ನೆರವಿನ ಹಸ್ತ ಚಾಚಿದ್ದಾರೆ. ವಿಶ್ವ ಚಾಂಪಿಯನ್‌ ಸಿಂಧು, ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ₹ 5 ಲಕ್ಷ ದೇಣಿಗೆ ನೀಡಿದ್ದಾರೆ. ಈ ವಿಷಯವನ್ನು ಅವರು ಗುರುವಾರ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಹೈದರಾಬಾದ್‌ನ ಆಟಗಾರ್ತಿ ಸಿಂಧು, 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಯ ಪದಕ ಜಯಿಸಿದ್ದರು. ಟೋಕಿಯೊ ಕೂಟದ ಮಹಿಳಾ ಸಿಂಗಲ್ಸ್‌ನಲ್ಲೂ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.