ಫಿಡೆ ಚೆಸ್‌: ಡ್ರಾ ಸಾಧಿಸಿದ ಹಾರಿಕ ಲೂಸನ್‌: ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಹಾರಿಕ ದ್ರೋಣವಳ್ಳಿ, ಫಿಡೆ ಮಹಿಳಾ ಗ್ರ್ಯಾನ್‌ ಪ್ರಿ ಚೆಸ್‌ ಟೂರ್ನಿಯ ಪಂದ್ಯದಲ್ಲಿ ಡ್ರಾ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ನಡೆದ ಏಳನೇ ಸುತ್ತಿನ ಹಣಾಹಣಿಯಲ್ಲಿ ಹಾರಿಕ, ಕಜಕಸ್ತಾನದ ಝನ್‌ಸಯಾ ಅಬ್ದುಮಲಿಕ್‌ ವಿರುದ್ಧ ಪಾಯಿಂಟ್‌ ಹಂಚಿಕೊಂಡರು. ವಿಶ್ವ ರ‍್ಯಾಂಕಿಂಗ್‌ನಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಹಾರಿಕ ಖಾತೆಯಲ್ಲಿ ನಾಲ್ಕು ಪಾಯಿಂಟ್ಸ್‌ ಇವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.